ಬೆಂಗಳೂರು(ಡಿ.20): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಿಟಿ ರವಿ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ತನಿಖೆಗೆ ಸಹಕರಿಸಬೇಕು ಎಂಬ ಷರತ್ತನ್ನು ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 21ಕ್ಕೆ ಮುಂದೂಡಿತ್ತು. ಆದರೆ, ಈಗ ಸಿಟಿ ರವಿಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಬೆಳಗಾವಿ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕರೆತರಲಾಗುತ್ತಿದೆ. ಆದಾಗ್ಯೂ, ಹೈಕೋರ್ಟ್ ಅವರನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದೆ.
ವಾದ ಮತ್ತು ಪ್ರತಿವಾದ ಹೇಗಿತ್ತು?
ಸಿಟಿ ರವಿ ಪರ ವಕೀಲ ಸಂದೇಶ್ ಚೌಟಾ, ಆರೋಪಿ ಮತ್ತು ವಾದಿ ಇಬ್ಬರೂ ಶಾಸಕರು. ವಿಧಾನ ಪರಿಷತ್ತಿನಲ್ಲಿ ಇದು ನಡೆಯುತ್ತಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಗಳಿಗೆ 7 ವರ್ಷಗಳಿಗಿಂತ ಕಡಿಮೆ ಶಿಕ್ಷೆ ವಿಧಿಸಲಾಗುತ್ತದೆ. ೪೧ ಎ ಅಡಿಯಲ್ಲಿ ನೋಟಿಸ್ ನೀಡಬೇಕಿತ್ತು. ಪೊಲೀಸರು ಬಂಧನಕ್ಕೆ ಕಾರಣಗಳನ್ನು ನೀಡಬೇಕಿತ್ತು. ಆದರೆ ಈ ಬಗ್ಗೆ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಪೊಲೀಸರ ಹಲ್ಲೆಯಿಂದ ಗಾಯಗಳಾಗಿವೆ ಎಂದು ಸಿಟಿ ರವಿ ಪರ ವಕೀಲರು ವಾದಿಸಿದ್ದಾರೆ