ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ದೂರು ನೀಡಲು ಬಂದ ಮಹಿಳೆಯನ್ನು ಡಿವೈಎಸ್ಪಿಯೊಬ್ಬರು ತಮ್ಮ ಸುಖಕ್ಕಾಗಿ ಬಳಸಿಕೊಂಡಿದ್ದಾರೆ.
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಡಿವೈಎಸ್ಪಿಯೊಬ್ಬರು ದೂರು ನೀಡಲು ಬಂದ ಮಹಿಳೆಯನ್ನು ತಮ್ಮ ಸುಖಕ್ಕಾಗಿ ಬಳಸಿಕೊಂಡಿದ್ದಾರೆ.
ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ರಾಸ ಲೀಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಡಿವೈಎಸ್ಪಿ ತಲೆಮರೆಸಿಕೊಂಡಿದ್ದಾರೆ.
ಪಾವಗಡದ ಮಹಿಳೆಯೊಬ್ಬರು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಈ ಬಗ್ಗೆ ವಿಚಾರಿಸಲು ಮಹಿಳೆಯನ್ನು ಡಿವೈಎಸ್ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ರಾಮಚಂದ್ರಪ್ಪ ಮಹಿಳೆಗೆ ಆಮಿಷ ಒಡ್ಡಿ ಕಚೇರಿಯ ಶೌಚಾಲಯಕ್ಕೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಾನೆ.
ಡಿವೈಎಸ್ಪಿ ರಾಮಚಂದ್ರಪ್ಪ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.